ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಒಂದೇ ತಿಂಗಳಲ್ಲಿ 1200 ಜನರಲ್ಲಿ ಸೋಂಕು ಪತ್ತೆಯಾಗಿದೆ.
ದೆಹಲಿಯಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಅಕ್ಟೋಬರ್ ಒಂದೇ ತಿಂಗಳಲ್ಲಿ 1200 ಜನರಲ್ಲಿ ಡೆಂಗ್ಯೂ ಸೋಂಕು ದೃಢಪಟ್ಟಿದೆ. ಕಳೆದ ನಾಲ್ಕು ವರ್ಷಗಳಲ್ಲಿಯೇ ಒಂದು ತಿಂಗಳಲ್ಲಿ ಪತ್ತೆಯಾದ ಅತಿ ಹೆಚ್ಚು ಪ್ರಕರಣ ಇದಾಗಿದೆ.
ರೇಜರ್ ಬ್ಲೇಡ್ ಜೀರ್ಣಿಸಿಕೊಳ್ಳುತ್ತೆ ನಮ್ಮ ದೇಹ….!
ಡೆಂಗ್ಯೂಗೆ ಸಂಬಂಧಿಸಿದಂತೆ ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಡಾಟಾ ಬಿಡುಗಡೆ ಮಾಡಿದ್ದು, ಅಕ್ಟೋಬರ್ 30ರವರೆಗೆ ದೆಹಲಿಯಲ್ಲಿ 1537 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ. ಹಿಂದಿನ ಡಾಟಾ ಅವಲೋಕಿಸುವುದಾದರೆ 2020ರಲ್ಲಿ ಜನವರಿ 1ರಿಂದ ಅಕ್ಟೋಬರ್ 30ರವರೆಗೆ 612 ಡೆಂಗ್ಯೂ ಪ್ರಕರಣ ಪತ್ತೆಯಾಗಿದ್ದವು. ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವಿಯಾ ಸೂಚಿಸಿದ್ದಾರೆ.