ಮಡಿಕೇರಿ: ಲಾರಿಯಿಂದ ರಾಸಾಯನಿಕ ದ್ರವ ಸೋರಿಕೆಯಾದ ಪರಿಣಾಮ 6 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ನೆಲ್ಯಾಹುದಿಕೇರಿಯಲ್ಲಿ ನಡೆದಿದೆ.
ಮಾಕುಟ್ಟ ಚೆಕ್ ಪೋಸ್ಟ್ ನಲ್ಲಿ ರಾಸಾಯನಿಕ ಸೋರಿಕೆ ಲಾರಿ ಪತ್ತೆಯಾಗಿದ್ದು, ಚಾಲಕ ಹೇಳುವ ಪ್ರಕಾರ ಕಾಳುಮೆಣಿಸಿನ ಸಾಸ್ ಸೋರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಆದರೆ ರಾಸಾಯನಿಕ ಸೋರಿಕೆಯಿಂದ ವಿದ್ಯಾರ್ಥಿಗಳಲ್ಲಿ ಕೆಮ್ಮು, ಸೀನುವಿಕೆ, ತುರಿಕೆ ಆರಂಭವಾಗಿದ್ದು, ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಅನಾರೋಗ್ಯಕ್ಕೀಡಾದ ಮಕ್ಕಳನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.