
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸದೀಯ ಸ್ಥಾನದಿಂದ ಅನರ್ಹಗೊಳಿಸಿರುವ ವಿಚಾರವಾಗಿ ಕಿಡಿ ಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜಕೀಯ ದ್ವೇಷದಿಂದಾಗಿ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ ಎಂದು ಗುಡುಗಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಇಬ್ಬರು ಶಾಸಕರು ಚೆಕ್ ಬೌನ್ಸ್ ಹಾಗೂ ಇತರೆ ಪ್ರಕರಣದಲ್ಲಿ ಜೈಲುಶಿಕ್ಷೆಗೆ ಗುರಿಯಾಗಿದ್ದಾರೆ. ಆದರೂ ಅವರನ್ನು ಅನರ್ಹಗೊಳಿಸಿಲ್ಲ ಯಾಕೆ ? ಅವರಿಗೊಂದು ಕಾನೂನು ನಮಗೊಂದು ಕಾನೂನಾ ? ಇದು ರಾಜಕೀಯ ದ್ವೇಷದ ಕೆಲಸ. ಕೇಂದ್ರ ಸರ್ಕಾರ ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹಗೊಳಿಸಿದೆ ಎಂದರು.
ಇದು ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಡೆಯುತ್ತಿರುವ ದಾಳಿ, ಸುಮ್ಮನಿರುವ ಪ್ರಶ್ನೆಯೇ ಇಲ್ಲ, ಎಲ್ಲಾ ರೀತಿಯ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.