alex Certify BIG NEWS: ‘ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್; ಡ್ರಗ್ ಪೆಡ್ಲರ್’; ವಿವಾದಾತ್ಮಕ ಬಾಂಬ್ ಸಿಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ‘ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್; ಡ್ರಗ್ ಪೆಡ್ಲರ್’; ವಿವಾದಾತ್ಮಕ ಬಾಂಬ್ ಸಿಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಹುಬ್ಬಳ್ಳಿ: ಉಪಚುನಾವಣಾ ಪ್ರಚಾರದ ಮಾತಿನ ಬರದಲ್ಲಿ ರಾಜಕೀಯ ಪಕ್ಷಗಳ ನಾಯಕರಿಂದ ವಿವಾದಾತ್ಮಕ ಹೇಳಿಕೆಗಳು ಹೊರಬರುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಡ್ರಗ್ ಪೆಡ್ಲರ್ ಎಂಬ ವರದಿಯಿದೆ ಎಂದು ಹೇಳುವ ಮೂಲಕ ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್, ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಎಂಬ ಬಗ್ಗೆ ಮಾಹಿತಿ ಇದೆ. ಇದನ್ನು ನಾನು ಹೇಳಿದ್ದಲ್ಲ, ವರದಿಯೇ ಬಂದಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಪಟ್ಟಕ್ಕಾಗಿ ತಾಯಿ-ಮಗನ ನಡುವೆಯೇ ಪೈಪೋಟಿಯಿದೆ. ಸೋನಿಯಾ ಗಾಂಧಿ-ರಾಹುಲ್ ಗಾಂಧಿ ಅಧ್ಯಕ್ಷ ಪಟ್ಟಕ್ಕಾಗಿ ಪೈಪೋಟಿ ನಡೆಸಿದ್ದಾರೆ. ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರು ಯಾರು? ಒಂದು ರಾಜಕೀಯ ಪಕ್ಷವನ್ನೇ ಮುನ್ನಡೆಸಲಾಗದವರು ದೇಶವನ್ನು ಮುನ್ನಡೆಸುತ್ತಾರಾ? ಎಂದು ಪ್ರಶ್ನಿಸಿದರು.

BIG NEWS: ಬಾದಾಮಿಯಿಂದ ಚಾಮರಾಜಪೇಟೆಗೆ ವಲಸೆ ಹೋಗಲು ಸಿದ್ಧತೆ; ಕಿಸ್ ಕಾ ಸಾತ್ ಕಿಸ್ ಕಾ ವಿಕಾಸ್ ’ಬುರುಡೆರಾಮಯ್ಯ’…..?; ವಿಪಕ್ಷ ನಾಯಕನ ವಿರುದ್ಧ ಚಾಟಿ ಬೀಸಿದ BJP

ನಮ್ಮ ಪ್ರಧಾನಿ ಮೋದಿಯವರು ’ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಅಂದ್ರೆ ವಿಪಕ್ಷ ನಾಯಕ ಸಿದ್ದರಾಮಯ್ಯನವರದ್ದು ’ಸಾಬರ್ ಕಾ ಸಾಥ್ ಸಾಬರ್ ಕಾ ವಿಕಾಸ್’. ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಜೋಡೆತ್ತುಗಳಲ್ಲ, ಕಾಡೆತ್ತುಗಳು. ಒಬ್ಬರಿಗೊಬ್ಬರು ಕಾದಾಟ ಶುರು ಮಾಡಿದ್ದಾರೆ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.

ಗರ್ಭಿಣಿಯಾಗುವ ಚಟಕ್ಕೆ ಬಿದ್ದ ಮಹಿಳೆ…! 8 ಮಕ್ಕಳಿರುವ ಈಕೆಗೆ ಬೇಕಂತೆ ಮತ್ತಷ್ಟು ಮಕ್ಕಳು

ಇನ್ನು ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಜೀವಮಾನದಲ್ಲಿಯೇ ಪಿಸುಮಾತು ಆಡಿದವರಲ್ಲ, ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಗ್ಗೆ ಪಿಸುಮಾತು ಆಡಿದರು. ಉಗ್ರಪ್ಪ ಪಿಸುಮಾತಿನ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ ಎಂದ ಕಟೀಲ್, ಕಾಂಗ್ರೆಸ್ ಮುಂದಿನ ಚುನಾವಣೆಗೆ ಒಟ್ಟಾಗಿ ಹೋಗಲ್ಲ, ಚುನಾವಣೆ ವೇಳೆ ಕಾಂಗ್ರೆಸ್ 2 ಹೋಳಾಗುತ್ತೆ ಎಂದು ಭವಿಷ್ಯ ನುಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...