ಬೆಂಗಳೂರು: ರಾಜ್ಯದಲ್ಲಿ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ 6ನೇ ದಿನಕ್ಕೆ ಕಾಲಿಟ್ಟಿದೆ. ರಾಹುಲ್ ಗಾಂಧಿಯವರ ದಣಿವರಿಯದ ನಡಿಗೆಗೆ ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಹುಲ್ ಗಾಂಧಿಯವರ ಆರೋಗ್ಯದ ಗುಟ್ಟು ಅವರ ಆರೋಗ್ಯಕರ ಮನಸ್ಸು. ರಾಹುಲ್ ಗಾಂಧಿಯವರ ಜೊತೆ ಹೆಜ್ಜೆ ಹಾಕುತ್ತಾ ನಾನೂ ಯುವಕನಾದೆ ಎಂದು ಟ್ವೀಟರ್ ನಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.
ಭರವಸೆಯ ಕೈಗಳು ಹೀಗೆಯೇ ಕೈ ಹಿಡಿದರೆ ದಾರಿ ಎಷ್ಟೇ ದುರ್ಗಮವಾಗಿದ್ದರೂ ಗುರಿ ಮುಟ್ಟುವುದು ಖಚಿತ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಇಂದಿನ ಭಾರತ್ ಜೋಡೋ ಯಾತ್ರೆ ಜವಾಬ್ದಾರಿಯನ್ನು ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಗೆ ನೀಡಲಾಗಿದೆ. ಕಾರಣ ಪ್ರಮುಖ ನಾಯಕರಾದ ಡಿ.ಕೆ.ಶಿವಕುಮಾರ್ ಇಡಿ ವಿಚಾರಣೆ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿದ್ದರೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಿಎಂ ಕರೆದಿರುವ ಸರ್ವಪಕ್ಷಗಳ ಸಭೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ.