
ಚಿಕ್ಕಮಗಳೂರು: ವಿಪಕ್ಷ ನಾಯಕನ ಆಯ್ಕೆ ಗೊಂದಲ, ರಾಜ್ಯಾಧ್ಯಕ್ಷರ ಆಯ್ಕೆ ಗೊಂದಲಗಳು ಮುಂದುವರೆದಿರುವ ನಡುವೆಯೇ ರಾಜ್ಯ ಬಿಜೆಪಿ ನಾಯಕರಾದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ.
ಚಿಕ್ಕಮಗಳೂರಿನ ಖಾಸಗಿ ರೆಸಾರ್ಟ್ ಗೆ ತೆರಳಿರುವ ಮಾಜಿ ಸಿಎಂ ಬೊಮ್ಮಾಯಿ, ಆರ್. ಅಸೋಕ್ ಸೇರಿದಂತೆ ಹಲವು ನಾಯಕರು ವಿಶ್ರಾಂತಿ ಪಡೆಯುತ್ತಿದ್ದಾರೆ.
ಮಾಜಿ ಸಚಿವ ಆರ್.ಅಶೋಕ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಬೀಡು ಬಿಟ್ಟಿರುವ ರಾಜ್ಯ ಬಿಜೆಪಿ ನಾಯಕರು ಹುಟ್ಟುಹಬ್ಬ ಆಚರಣೆ ಬಳಿಕ ನಾಳೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದುಬಂದಿದೆ.