ದಾವಣಗೆರೆ: ನಕಲಿ ಮೀಸಲಾತಿ ಪ್ರಮಾಣ ಪತ್ರ ವಿವಾದಕ್ಕೆ ಸಂಬಂಧಿಸಿದಂತೆ ಶಾಸಕ ಎಂ.ಪಿ.ರೇಣುಕಾಚಾರ್ಯ ಸಹೋದರ ಸೇರಿ 11 ಜನರ ವಿರುದ್ಧ ದಾವಣಗೆರೆ ಕೆಟಿಜೆ ನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ದಲಿತ ಮುಖಂಡ ಹೆಗ್ಗೆರೆ ರಂಗಪ್ಪ ದೂರು ಹಿನ್ನೆಲೆಯಲ್ಲಿ ರೇಣುಕಾಚಾರ್ಯ ಸಹೋದರ ದ್ವಾರಕೇಶ್ವರಯ್ಯ ಸೇರಿದಂತೆ 11 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 143, 147, 323, 504, 506, 149 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಬೇಡ ಜಂಗಮ ಎಂದು ನಕಲಿ ಎಸ್ಸಿ ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ಆರೋಪಿಸಿ ದ್ವಾರಕೇಶ್ವರಯ್ಯ ಅವರನ್ನು ದಲಿತ ಮುಖಂಡರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ದ್ವಾರಕೇಶ್ವರಯ್ಯ ಈ ಹಿಂದೆ 13 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದರು.