ಬೆಂಗಳೂರು: ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಜವಾಬ್ದಾರಿ ಹೇಳಿಕೆ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ರೇಪ್ ನಡೆದಿದ್ದು ಅಲ್ಲಿ, ಕಾಂಗ್ರೆಸ್ ನವರು ನನ್ನ ಮೇಲೆ ರೇಪ್ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಅತ್ಯಾಚಾರ ನಡೆದಿರುವುದು ಮೈಸೂರಿನಲ್ಲಿ, ಇಲ್ಲಿ ಕಾಂಗ್ರೆಸ್ ನವರು ಗೃಹ ಸಚಿವರ ಮೇಲೆ ಅತ್ಯಾಚಾರ ನಡೆಸುತ್ತಿದ್ದಾರೆ. ಸಂಜೆ 7:30ಕ್ಕೆ ಆ ಯುವಕ, ಯುವತಿ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು. ಅತ್ಯಾಚಾರ ಆರೋಪಿಗಳ ಪತ್ತೆಗಾಗಿ ತನಿಖಾ ತಂಡ ರಚಿಸಲಾಗಿದೆ ಎಂದರು.
BIG NEWS: ಕೊರೊನಾ ವೇಳೆ ಇಎಂಐ ವಹಿವಾಟಿನಲ್ಲಿ ಶೇ.220ರಷ್ಟು ಹೆಚ್ಚಳ
ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದು ಎರಡು ದಿನಗಳಾದರೂ ಆರೋಪಿಗಳನ್ನು ಬಂಧಿಸಿಲ್ಲ. ಇದು ಗೃಹ ಇಲಾಖೆ ಕಾರ್ಯಕ್ಷಮತೆ ಕುಸಿದಿದೆ ಎಂಬ ಕಾಂಗ್ರೆಸ್ ಟೀಕೆಗೆ ಪ್ರತಿಕ್ರಿಯಿಸುತ್ತಾ, ಕಾಂಗ್ರೆಸ್ ನವರು ರಾಜಕೀಯ ಲಾಭಕ್ಕಾಗಿ ಹೇಳಿಕೆ ನೀಡುತಿದ್ದಾರೆ. ರೇಪ್ ನಡೆದಿದ್ದು ಅಲ್ಲಿ, ಕಾಂಗ್ರೆಸ್ ನವರು ನನ್ನ ಮೇಲೆ ರೇಪ್ ಮಾಡುತ್ತಿದ್ದಾರೆ ಎಂದು ಬಾಲಿಷವಾಗಿ ಮಾತನಾಡಿದ್ದಾರೆ. ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆಗೆ ಕಾಂಗ್ರೆಸ್ ಕೆಂಡಕಾರಿದೆ.