alex Certify BIG NEWS: ರೈತರನ್ನು ನೇರವಾಗಿ ಹತ್ಯೆ ಮಾಡಲು ಹೊರಟ ಸರ್ಕಾರ; ಇದು ಬಿಜೆಪಿಯ ಕೊಲೆಗಡುಕ ಮನಸ್ಸಿಗೆ ಸಾಕ್ಷಿ; ಸಿದ್ದರಾಮಯ್ಯ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರೈತರನ್ನು ನೇರವಾಗಿ ಹತ್ಯೆ ಮಾಡಲು ಹೊರಟ ಸರ್ಕಾರ; ಇದು ಬಿಜೆಪಿಯ ಕೊಲೆಗಡುಕ ಮನಸ್ಸಿಗೆ ಸಾಕ್ಷಿ; ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ರೈತರ ಮೇಲೆ ಸಚಿವರ ಮಗನ ಕಾರು ಹರಿದು, ರೈತರು ಮೃತಪಟ್ಟಿರುವ ಪ್ರಕರಣ ಬಿಜೆಪಿ ಕೊಲೆಗಡುಕ ಮನಸ್ಸಿಗೆ ಸಾಕ್ಷಿ. ರೈತರನ್ನು ಶತ್ರುಗಳೆಂದು ತಿಳಿದಿರುವ ಬಿಜೆಪಿ ಸರ್ಕಾರ ಅವರನ್ನು ಪೊಲೀಸರ ಮೂಲಕ ದಮನಿಸಲು ಯತ್ನಿಸಿ ವಿಫಲವಾದ ನಂತರ ಈಗ ನೇರವಾಗಿ ಹತ್ಯೆ ಮಾಡಲು ಹೊರಟಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಗೂಂಡಾ ರಾಜ್ಯದಲ್ಲಿ ರೈತರು, ಮಹಿಳೆಯರು, ಬಡವರು, ದಲಿತರ ಮಾನ-ಪ್ರಾಣ ಯಾವುದೂ ಸುರಕ್ಷಿತವಲ್ಲ. ಸಂವಿಧಾನವೇ ಕುಸಿದು ಬಿದ್ದಿರುವ ಸ್ಥಿತಿಯಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಅಲ್ಲಿನ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇಂದೋರ್‌ ಹೋಟೆಲ್‌ ಗಳಲ್ಲಿ ಇನ್ಮುಂದೆ ಸಿಗೋದು ಕೇವಲ ‘ಅರ್ಧ ಗ್ಲಾಸ್‌ ನೀರು’ ಮಾತ್ರ…!

ಪ್ರತಿರೋಧ-ಭಿನ್ನಾಭಿಪ್ರಾಯವನ್ನು ಸಹಿಸದ ಕೇಂದ್ರದ ಬಿಜೆಪಿ ಸರ್ಕಾರ ತನ್ನ ತಾಲಿಬಾನಿ ಮನಸ್ಥಿತಿಯನ್ನು ಬಹಿರಂಗಪಡಿಸುತ್ತಿದೆ. ರೈತರ ಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಲು ಹೊರಟ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಿರುವ ಯೋಗಿ ಆದಿತ್ಯನಾಥ್ ಸರ್ಕಾರದ ಕೃತ್ಯ ಖಂಡನೀಯ ಎಂದು ಕಿಡಿಕಾರಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...