ಬೆಳಗಾವಿ: ಎನ್ ಹೆಚ್ 4ರ ಮಚ್ಚೆ-ಹಲಗಾ ಬೈಪಾಸ್ ರಸ್ತೆ ಕಾಮಗಾರಿಗೆ ವಿರೋಧಿಸಿ ಪ್ರತಿಭಟನೆ ನಡೆಸಿದ್ದ ರೈತರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರೂ ಕೂಡ ಕೇರ್ ಮಾಡದ ಜಿಲ್ಲಾಡಳಿತ ಇಂದು ರಸ್ತೆ ಕಾಮಗಾರಿಗೆ ಮುಂದಾಗಿದೆ.
ಬೆಳಗಾವಿ ಜಿಲ್ಲೆಯ ಮಚ್ಚೆ ಗ್ರಾಮದಲ್ಲಿ ಬೈಪಾಸ್ ರಸ್ತೆ ಕಾಮಗಾರಿಗೆ ವಿರೋಧಿಸಿ ನಿನ್ನೆ ರೈತರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ನೇತೃತ್ವದಲ್ಲಿ ರೈತರು ಹಾಗೂ ಅಧಿಕಾರಿಗಳ ಸಂಧಾನ ಸಭೆ ನಡೆಸಲಾಗಿತ್ತು. ಸಂಧಾನಕ್ಕೆ ಬಗ್ಗದ ರೈತರು, ಯಾವುದೇ ಕಾರಣಕ್ಕೂ ರಸ್ತೆ ಕಾಮಗಾರಿಗೆ ಜಮೀನು ಬಿಟ್ಟುಕೊಡುವುದಿಲ್ಲ. ಪ್ರತಿಭಟನೆಯನ್ನು ಮುಂದುವರೆಸುವುದಾಗಿ ಘೋಷಿಸಿದ್ದರು.
ಬಹುನಿರೀಕ್ಷಿತ ಸ್ಕೋಡಾ ’ಸ್ಲೇವಿಯಾ’ ಸೆಡಾನ್ ಕಾರಿನ ಡ್ರೈವರ್ ಕ್ಯಾಬಿನ್ ಸ್ಕೆಚ್ ಬಿಡುಗಡೆ
ರೈತರ ಎಚ್ಚರಿಕೆ ಬಳಿಕವೂ ಜಿಲ್ಲಾಡಳಿತ ರಸ್ತೆ ಕಾಮಗಾರಿಗೆ ಮುಂದಾಗಿದ್ದು, ವರ್ಕ್ ಆರ್ಡರ್ ಹಿಡಿದು 9.5 ಕಿ.ಮೀ ಮಾರ್ಕಿಂಗ್ ಕೆಲಸ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ ರೈತರಿಗೆ ಪರಿಹಾರ ನೀಡಿಯೇ ಈ ಹಿಂದೆ ಭೂಸ್ವಾಧೀನ ಮಾಡಲಾಗಿತ್ತು. ಈ ಬಾರಿ ರೈತರು ಹೆಚ್ಚಿನ ಪರಿಹಾರ ಕೇಳಿದರೆ ಆ ಬಗ್ಗೆಯೂ ಚರ್ಚೆ ನಡೆಸಲಾಗುವುದು ಎಂದು ಸಮಜಾಯಿಷಿ ನೀಡಿದ್ದಾರೆ.