ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರ ಮಹತ್ವಾಕಾಂಕ್ಷಿ ಯೋಜನೆ ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಯೋಜನೆಗೆ ಚಾಲನೆ ನೀಡಲಾಯಿತು.
ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ ರೈತ ಮಕ್ಕಳಿಗೆ ಶಿಷ್ಯ ವೇತನ ನೀಡುವ ರೈತ ವಿದ್ಯಾನಿಧಿ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಿದರು. ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರಿಂದ ವಿದ್ಯಾರ್ಥಿಗಳ ಖಾತೆಗೆ ವಿದ್ಯಾನಿಧಿ ಹಣ ವರ್ಗಾವಣೆ ಮಾಡಲಾಯಿತು.
ಬ್ಯಾಂಕ್ ದರೋಡೆ; ನಾಲ್ವರ ಬಂಧನ
17 ಲಕ್ಷ ರೈತ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಯೋಜನೆ ಜಾರಿಗೆ ತರಲಾಗಿದ್ದು, ಪಿಯುಸಿ, ಐಟಿಐ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ 2,500 ರೂ. ಹಾಗೂ ವಿದ್ಯಾರ್ಥಿನಿಯರಿಗೆ 3,000 ರೂ. ಹಣ ನೀಡಲಾಗುತ್ತಿದೆ.
ಪದವಿ ವಿದ್ಯಾರ್ಥಿಗಳಿಗೆ 5,000 ರೂ., ವಿದ್ಯಾರ್ಥಿನಿಯರಿಗೆ 5,500 ರೂ. ಹಣ ವನ್ನು ಸರ್ಕಾರ ನೀಡಲಿದೆ. ಎಲ್ ಎಲ್ ಬಿ, ಪ್ಯಾರಾಮೆಡಿಕಲ್, ಬಿ ಫಾರ್ಮ್. ನರ್ಸಿಂಗ್, ವೃತ್ತಿಪರ ಕೋರ್ಸ್ ಗಳ ವಿದ್ಯಾರ್ಥಿ ಗಳಿಗೆ 7,500 ಹಾಗೂ ವಿದ್ಯಾರ್ಥಿನಿಯರಿಗೆ 8,000 ರೂ. ಹಣ ರಾಜ್ಯ ಸರ್ಕಾರ ನೀಡಲಿದೆ.
ಎಂಬಿಬಿಎಸ್, ಬಿಇ, ಬಿ.ಟೆಕ್ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 10 ಸಾವಿರ ವಿದ್ಯಾರ್ಥಿನಿಯರಿಗೆ 11 ಸಾವಿರ ರೂಪಾಯಿ ಶಿಷ್ಯ ವೇತನವನ್ನು ಸರ್ಕಾರ ನೀಡಲಿದೆ.