ಬೆಂಗಳೂರು: ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ನಡೆಯುತ್ತಿದ್ದ ರೈತ ಸಂಘಟನೆಗಳ ಪ್ರತಿಭಟನೆ ಮುಕ್ತಾಯಗೊಂಡಿದೆ. ಭಾರತ್ ಬಂದ್ ಯಶಸ್ವಿಯಾಗಿದೆ ಎಂದು ರೈತ ಮುಖಂಡ ಕೊಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.
ಬೆಂಗಳೂರಿನ ಟೌನ್ ಹಾಲ್ ನಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಬೃಹತ್ ಪ್ರತಿಭಟನಾ ಜಾಥಾ ನಡೆಸಿದ ಬಳಿಕ ಸಭೆ ನಡೆಸಿದ ಕೋಡಿಹಳ್ಳಿ ಚಂದ್ರಶೇಖರ್, ಬೆಂಗಳೂರಿನ ನಾಲ್ಕು ಭಾಗದಿಂದ ಪ್ರತಿಭಟನೆ ಆರಂಭಿಸಿ ಇದೀಗ ಪ್ರತಿಭಟನೆ ಅಂತ್ಯಗೊಳಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನ್ನದಾತರು ಪ್ರತಿಭಟನೆ ನಡೆಸಿ ಕೇಂದ್ರ ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆ ನೀತಿ ಖಂಡಿಸಿದ್ದಾರೆ. ಹೆದ್ದಾರಿಗಳನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದರು.
ಶಾಲೆ ಆರಂಭದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್
ಕಳೆದ ಹತ್ತು ತಿಂಗಳಿಂದ ರೈತರು ದೇಶಾದ್ಯಂತ ಕೃಷಿ ಕಾಯ್ದೆ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಆದರೂ ಕೇಂದ್ರ ಸರ್ಕಾರ ರೈತರ ಸಂಕಷ್ಟವನ್ನು ಆಲಿಸುತ್ತಿಲ್ಲ. ಕೋವಿಡ್ ಸಂಕಷ್ಟದ ನಡುವೆ ಇದೀಗ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಇಂದು ಪ್ರತಿಭಟನೆ ಅಂತ್ಯವಾಗಲಿದೆ ಆದರೆ ಕೃಷಿ ಕಾಯ್ದೆ ವಾಪಸ್ ಪಡೆಯದಿದ್ದರೆ ನವೆಂಬರ್ ನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗುತ್ತದೆ. ದೆಹಲಿಯಲ್ಲಿ ಮುಂದಿನ ಹೋರಾಟದ ಬಗ್ಗೆ ಸಂಯುಕ್ತ ಮೋರ್ಚಾ ತೀರ್ಮಾನಿಸಲಿದೆ ಎಂದು ತಿಳಿಸಿದರು.