ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮೂವರು ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೊಂಡೆಬಾವಿ ಬಳಿ ನಡೆದಿದೆ.
ಪತಿ-ಪತ್ನಿ ಹಾಗೂ ಮಗಳು ಮೂವರು ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ದೇಹಗಳು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮೃತ ವ್ಯಕ್ತಿಯ ಶರ್ಟ್ ಮೇಲೆ ವಿನಾಯಕ ಟೈಲರ್ ಗೌರಿಬಿದನೂರು ವಿಳಾಸದ ಸ್ಟಿಕ್ಕರ್ ಪತ್ತೆಯಾಗಿದೆ.
ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ.