ಬೆಂಗಳೂರು: ಚಲಿಸುತ್ತಿದ್ದ ರೈಲಿನಲ್ಲಿ ಅಪರಿಚಿತ ಮಹಿಳೆಯ ಶವವೊಂದು ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾಗಿರುವ ಘಟನೆ ಕೆಜಿಎಫ್ ನಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ನಡೆದಿದೆ.
ಬೆಡ್ ಶೀಟ್ ಹಾಗೂ ಬಟ್ಟೆಗಳ ನಡುವೆ ಮಹಿಳೆಯ ಶವ ಪತ್ತೆಯಾಗಿದೆ. ಬೆಂಗಳೂರು ತಲುಪಿದ ರೈಲು ಖಾಲಿಯಾದರೂ ಚೀಲವನ್ನು ಯಾರೂ ಕೊಂಡೊಯ್ಯಲಿಲ್ಲ. ಇದರಿಂದ ಅನುಮಾನಗೊಂಡ ಕೆಲ ಪ್ರಯಾಣಿಕರು ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಚೀಲವನ್ನು ಬಿಚ್ಚಿ ಪರಿಶೀಲಿಸಿದಾಗ ಅದರಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಶವದ ಗುರುತು ಪತ್ತೆಗಾಗಿ ರೈಲ್ವೆ ಪೊಲಿಸರು ಯತ್ನಿಸಿದ್ದಾರೆ. ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.