
ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂ ರೈಲು ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ರೈಲ್ವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಭೇಟಿ ನೀಡಿರುವ ಮಲ್ಲೇಶ್ವರಂ ರೈಲ್ವೆ ಪೊಲೀಸರು, ಗುರುತು ಪತ್ತೆಗಾಗಿ ಯತ್ನಿಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಗಳಿಗೂ ಮಾಹಿತಿ ರವಾನಿಸಿದ್ದಾರೆ.
ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆಯೂ ಅನುಮಾನವಿದ್ದು, ಈ ನಿಟ್ಟಿನಲ್ಲಿಯೂ ತನಿಖೆ ನಡೆಸಿದ್ದಾರೆ.