ಬೆಂಗಳೂರು: ಹಿಂದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಮುಜರಾಯಿ ಇಲಾಖೆ ಆಯುಕ್ತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ ನೀಡಿದ್ದು, ತನಿಖಾಧಿಕಾರಿಯನ್ನು ನೇಮಕ ಮಾಡಿದೆ.
ರೋಹಿಣಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಅವರ ವಿರುದ್ಧ ನಾಲ್ಕು ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ತನಿಖೆಗೆ ಆದೇಶ ನೀಡಿರುವ ರಾಜ್ಯ ಸರ್ಕಾರ, ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್. ಜಯರಾಮ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಿದೆ. ಅಲ್ಲದೇ 30 ದಿನಗಳ ಒಳಗೆ ತನಿಖಾ ವರದಿ ನೀಡುವಂತೆ ಸೂಚಿಸಿದೆ.
ಹೊಸ ಸಂಬಂಧದಲ್ಲಿ ಅಪ್ಪಿತಪ್ಪಿಯೂ ಈ 5 ವಿಚಾರಗಳನ್ನು ನಿಮ್ಮ ಗೆಳತಿಗೆ ಹೇಳಬೇಡಿ
ಹೆಚ್ಚಿನ ಹಣ ಕೊಟ್ಟು ಬಟ್ಟೆ ಬ್ಯಾಗ್ ಖರೀದಿ ಹಗರಣ, 50 ಲಕ್ಷ ವೆಚ್ಚದಲ್ಲಿ ಅನಧಿಕೃತ ಈಜುಕೊಳ ಹಾಗೂ ಜಿಮ್ ನಿರ್ಮಾಣ, ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ ಮುಚ್ಚಿಟ್ಟ ಆರೋಪ, ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಆಮ್ಲಜನಕ ಪೂರೈಕೆ ವ್ಯತ್ಯಯದಿಂದ ರೋಗಿಗಳ ಸಾವಿಗೆ ಕಾರಣ ಆರೋಪ ರೋಹಿಣಿ ಸಿಂಧೂರಿ ವಿರುದ್ಧ ಕೇಳಿಬಂದಿದೆ.