ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ದೂರು ನೀಡಿದ್ದಾರೆ.
ಐಪಿಎಸ್ ಅಧಿಕಾರಿ ಡಿ. ರೂಪಾ ತಮ್ಮ ಫೇಸ್ ಬುಕ್ ನಲ್ಲಿ ರೋಹಿಣಿ ಸಿಂಧೂರಿ ವಿರುದ್ಧ 19 ಆರೋಪಗಳನ್ನು ಮಾಡಿದ್ದರು. ಈ ಆರೋಪಗಳ ಬಗ್ಗೆ ಅಖಿಲ ಭಾರತ ಸೇವಾ (ನಡತೆ) ನಿಯಮಗಳು, 1962ರ ನಿಯಮದ ಅಡಿಯಲ್ಲಿ ತನಿಖೆ ನಡೆಸುವಂತೆ ಮನವಿ ಸಲ್ಲಿಸುತ್ತೇನೆ ಎಂದು ದಿನೇಶ್ ಕಲ್ಲಹಳ್ಳಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ರೋಹಿಣಿ ವಿರುದ್ಧ ರೂಪ ಮಾಡಿರುವ ಆರೋಪಗಳ ಬಗ್ಗೆ ತನಿಖೆ ನಡೆಸಿ ಸತ್ಯಾಸತ್ಯತೆ ಬಯಲಿಗೆಳೆಯಬೇಕು. ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.