ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ಮೂವರು ಆರೋಪಿಗಳನ್ನು ರಾಮನಗರ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ.
ಪ್ರಕರಣ ಸಂಬಂಧ ಐವರ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಪೊಲೀಸರು ಈಗಾಗಲೇ ನಿರ್ದೇಶಕ ಶಂಕರ್ ರಾಜ್, ಸಾಹಸ ನಿರ್ದೇಶಕ ವಿನೋದ್ ಹಾಗೂ ಕ್ರೇನ್ ಆಪರೇಟರ್ ಮಹದೇವ್ ಅವರನ್ನು ಬಂಧಿಸಿದ್ದು, ಮೂವರನ್ನು ರಾಮನಗರ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ಕೊರೊನಾ ಲಸಿಕೆ ಅಭಿಯಾನದಲ್ಲಿ ದೊಡ್ಡ ಬದಲಾವಣೆ
ಈ ನಡುವೆ ನಿರ್ಮಾಪಕ ಗುರು ದೇಶಪಾಂಡೆ ಹಾಗೂ ಸಿನಿಮಾ ಇನ್ ಚಾರ್ಜ್ ಫರ್ನಾಂಡೀಸ್ ನಾಪತ್ತೆಯಾಗಿದ್ದು, ಇಬ್ಬರಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.
ಬಿಡದಿಯ ಜೋಗಿನಪಾಳ್ಯ ಬಳಿ ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ವಿವೇಕ್ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.