ರಾಮನಗರ: ಲವ್ ಯೂ ರಚ್ಚು ಸಿನಿಮಾ ಚಿತ್ರೀಕರಣದ ವೇಳೆ ಫೈಟರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನಗಳ ಕಾಲ ವಿಸ್ತರಿಸಿ ರಾಮನಗರ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಿರ್ದೇಶಕ ಶಂಕರಯ್ಯ, ಸಾಹಸ ನಿರ್ದೇಶಕ ವಿನೋದ್ ಕುಮಾರ್ ಹಾಗೂ ಕ್ರೇನ್ ಚಾಲಕ ಮಹದೇವ್ ಅವರ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
ಭಾರತೀಯ ಆಹಾರ ಪದ್ಧತಿ ಒಂದು ಮಸಾಲೆಯನ್ನು ಆಧರಿಸಿದೆ ಅಂಕಣಕ್ಕೆ ವ್ಯಕ್ತವಾಗ್ತಿದೆ ತೀವ್ರ ಟೀಕೆ
ರಾಮನಗರದ ಜೋಗಿನದೊಡ್ದಿ ಬಳಿ ಚಿತ್ರದ ಶೂಟಿಂಗ್ ವೇಳೆ ರೋಪ್ ಎಳೆಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ಫೈಟರ್ ವಿವೇಕ್ ಮೃತಪಟ್ಟಿದ್ದರು. ಚಿತ್ರತಂಡದ ನಿರ್ಲಕ್ಷ ಹಿನ್ನೆಲೆಯಲ್ಲಿ, ನಿರ್ದೇಶಕ ಶಂಕರಯ್ಯ, ಸಾಹಸ ನಿರ್ದೇಶಕ ವಿನೋದ್ ಕುಮಾರ್ ಹಾಗೂ ಕ್ರೇನ್ ಚಾಲಕ ಮಹದೇವ್ ಅವರನ್ನು ಬಂಧಿಸಿ ಆಗಸ್ಟ್ 10ರಂದು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಅಂದು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿತ್ತು. ಇಂದು ಆರೋಪಿಗಳನ್ನು ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಲಾಗಿದ್ದು, ಈ ವೇಳೆ ನ್ಯಾಯಾಧೀಶೆ ಅನುಪಮಾಲಕ್ಷ್ಮಿ ಆರೋಪಿಗಳಿಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ.