ಕೊಪ್ಪಳ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಕೊಪ್ಪಳ ಜಿಲ್ಲೆಗೆ ಎಂಟ್ರಿಕೊಟ್ಟಿದ್ದಾರೆ.
ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕೊಪ್ಪಳ ಜಿಲ್ಲೆಯ ವನಬಳ್ಳಾರಿಗೆ ಭೇಟಿ ನೀಡಿದ್ದು, ಸಿದ್ದರಾಮಯ್ಯ ನೋಡಲು ಜನರು ಸಾಗರೋಪಾದಿಯಲ್ಲಿ ಆಗಮಿಸಿದ್ದಾರೆ.
ಸಿದ್ದರಾಮಯ್ಯ ಚಾಪರ್ ನಿಂದ ಇಳಿಯುತ್ತಿದ್ದಂತೆ ಹೆಲಿಪ್ಯಾಡ್ ಗೆ ನುಗ್ಗಿದ ಅಭಿಮಾನಿಗಳು ಸಿದ್ದರಾಮಯ್ಯ ಪರ ಘೋಷಣೆಗಳನ್ನು ಕೂಗಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಆದರೂ ಸಾಧ್ಯವಾಗದೇ ಲಘು ಲಾಠಿಪ್ರಹಾರ ನಡೆಸಿದ್ದಾರೆ. ಆದರೂ ಕ್ಯಾರೇ ಎನ್ನದ ಸಿದ್ದರಾಮಯ್ಯ ಅಭಿಮಾನಿಗಳು ತಮ್ಮ ನಾಯಕನನ್ನು ನೋಡಲು ಮುಗಿಬಿದ್ದ ಘಟನೆ ನಡೆದಿದೆ.