ಗದಗ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿಯ ಬೆಣ್ಣಿಹಳ್ಳದ ಬಳಿ ನಡೆದಿದೆ.
ಪ್ರಕಾಶ್ ಇದ್ಲಿ (40), ಫಕೀರಪ್ಪ ಇದ್ಲಿ (38) ಮೃತರು. ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಓವರ್ ಟೇಕ್ ಮಾಡಲು ಹೋದ ಬೈಕ್ ಸವಾರರಿಬ್ಬರೂ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಲಾರಿ ಚಕ್ರದಡಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.