ಮಂಗಳೂರು: ಖ್ಯಾತ ವಕೀಲ ರಾಜೇಶ್ ಭಟ್ ವಿರುದ್ಧ ಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ವಕೀಲರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆದರೆ ತಮ್ಮ ವಿರುದ್ಧದ ಆರೋಪಗಳನ್ನು ವಕೀಲ ರಾಜೇಶ್ ಭಟ್ ತಳ್ಳಿಹಾಕಿದ್ದಾರೆ.
ವಿಡಿಯೋ ಮೂಲಕ ಸ್ಪಷ್ಟನೆ ನೀಡಿರುವ ವಕೀಲ ರಾಜೇಶ್, ಈ ಪ್ರಕರಣ ನನ್ನ ವಿರುದ್ಧ ನಡೆದಿರುವ ದೊಡ್ಡ ಷಡ್ಯಂತ್ರ. ನನ್ನ ಹೆಸರಿನ ಫೇಕ್ ಆಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಲಾಗುತ್ತಿತ್ತು. ಹಣ ಸುಲಿಗೆಗೆ ಬೇಡಿಕೆ ಇಟ್ಟಿರುವುದಾಗಿ ಸೆ.27 ರಂದು ನಾನು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೆ. ಈಗ ವಿದ್ಯಾರ್ಥಿನಿ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ನಿನ್ನೆ ದೂರು ನೀಡಿರುವುದಾಗಿ ತಿಳಿದುಬಂದಿದೆ. ಆದರೆ ವಿದ್ಯಾರ್ಥಿನಿ ಆರೋಪಗಳು ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.
ತನ್ನ ಇಚ್ಛೆ ವಿರುದ್ಧ ಮದುವೆಯಾಗಿದ್ದ ಪುತ್ರಿಯ ಬಾಳಿಗೆ ಕೊಳ್ಳಿ ಇಟ್ಟ ಪಾಪಿ ತಂದೆ..!
ವಕೀಲನಿಂದ ಲೈಂಗಿಕ ಕಿರುಕುಳ ಕೇಸ್ ಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ರಾಜೇಶ್ ನೀಡಿದ್ದ ದೂರನ್ನು ನಾವು ದಾಖಲಿಸಿಕೊಂಡಿದ್ದೇವೆ. ಫೇಕ್ ಆಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಬಗ್ಗೆ ದೂರು ನೀಡಿದ್ದರು ಎಂದಿದ್ದಾರೆ.
ಅಲ್ಲದೇ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಎಬಿವಿಪಿಯವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಹೇಳಿಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಆರೋಪಿ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಹೇಳಿದರು.