ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ವಿಪಕ್ಷಗಳು ರಣತಂತ್ರ ರೂಪಿಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಎನ್ ಸಿ ಪಿ ಮುಖಂಡ ಶರದ್ ಪವಾರ್ ನಿವಾಸದಲ್ಲಿ ಇಂದು ಮಹತ್ವದ ಸಭೆ ನಡೆಯಿತು.
ರಾಷ್ಟ್ರೀಯ ಒಕ್ಕೂಟ ಹೆಸರಲ್ಲಿ ನಡೆದ ಸಭೆಯಲ್ಲಿ ಎನ್ ಸಿ ಪಿ, ಎಎಪಿ, ಟಿಎಂಸಿ, ಸಿಪಿಐ, ಸಿಪಿಎಂ, ಆರ್ ಎಲ್ ಡಿ, ಎನ್ ಸಿ ಸೇರಿದಂತೆ ಹಲವು ಪಕ್ಷಗಳ ಮುಖಂಡರು ಭಾಗವಹಿಸಿದ್ದರು.
ಸಭೆಯಲ್ಲಿ ದೇಶದ ಪ್ರಸಕ್ತ ರಾಜಕೀಯ ಬೆಳವಣಿಗೆ, 2024ರ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಯಿತು ಎಂದು ತಿಳಿದು ಬಂದಿದೆ.