ಈ ಬಾರಿಯ ಲೋಕಸಭಾ ಚುನಾವಣೆ ದೇಶದಾದ್ಯಂತ ಏಳು ಹಂತಗಳಲ್ಲಿ ನಡೆದಿದ್ದು, ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಪೂರ್ಣಗೊಂಡಿತ್ತು. ಈ ಬಾರಿಯ ಕರ್ನಾಟಕ ಲೋಕಸಭಾ ಚುನಾವಣೆ ಹಲವು ವಿಶೇಷತೆಗಳಿಂದ ಕೂಡಿತ್ತು.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೂವರು ಮಾಜಿ ಮುಖ್ಯಮಂತ್ರಿಗಳು ಅಭ್ಯರ್ಥಿಗಳಾಗಿದ್ದರೆ, ಹಾಗೆಯೇ ಇಬ್ಬರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಪರಸ್ಪರ ಎದುರಾಳಿಯಾಗಿದ್ದರು.
ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ ಪುತ್ರರಾದ ಬಸವರಾಜ ಬೊಮ್ಮಾಯಿ (ಇವರು ಕೂಡ ಮಾಜಿ ಮುಖ್ಯಮಂತ್ರಿ) ಬಿಜೆಪಿಯಿಂದ, ಮಾಜಿ ಮುಖ್ಯಮಂತ್ರಿ ದೇವೇಗೌಡರ ಪುತ್ರ ಹೆಚ್.ಡಿ. ಕುಮಾರಸ್ವಾಮಿ (ಇವರು ಕೂಡ ಮಾಜಿ ಮುಖ್ಯಮಂತ್ರಿ) ಜೆಡಿಎಸ್ ನಿಂದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಯಿಂದ ಸ್ಪರ್ಧಿಸಿದ್ದು, ಈಗ ಇವರೆಲ್ಲರೂ ಗೆಲ್ಲುವ ನಿರೀಕ್ಷೆ ಇದೆ.
ಹಾಗೆಯೇ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ನಿಂದ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ. ರಾಘವೇಂದ್ರ ಎದುರಾಳಿಗಳಾಗಿದ್ದು ವಿಜಯಮಾಲೆ ಯಾರ ಕೊರಳಿಗೆ ಬೀಳಲಿದೆ ಎಂಬುದನ್ನು ಕಾದು ನೋಡಬೇಕಿದೆ.