![](https://kannadadunia.com/wp-content/uploads/2022/01/corona-1.png)
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಅಟ್ಟಹಾಸ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಲೋಕಾಯುಕ್ತ ಕಚೇರಿಯ 52 ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಲೋಕಾಯುಕ್ತ ಕಚೇರಿಯ 300 ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು, ಈ ವೇಳೆ 52 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ಎಲ್ಲಾ ಸಿಬ್ಬಂದಿಗಳಿಗೂ ಕ್ವಾರಂಟೈನ್ ಗೆ ಸೂಚಿಸಲಾಗಿದೆ.
ಲೋಕಾಯುಕ್ತ ಕಚೇರಿಯ ಹೆಚ್ಚಿನ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ಎರಡು ವಾರಗಳ ಕಾಲ ಕಚೇರಿಯನ್ನು ಬಂದ್ ಮಾಡಿ ಲೋಕಾಯುಕ್ತ ರಿಜಿಸ್ಟ್ರಾರ್ ಆದೇಶ ಹೊರಡಿಸಿದ್ದಾರೆ.