ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ.
ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ವಕೀಲರ ತಂಡದೊಂದಿಗೆ ಆಗಮಿಸಿದ ಮಾಡಾಳ್ ವಿರೂಪಾಕ್ಷಪ್ಪ, ವಿಚಾರಣೆಗೆ ಹಾಜರಾಗಿದ್ದಾರೆ. ಲೋಕಾಯುಕ್ತ ದಾಳಿಗೆ ಸಂಬಂಧಿಸಿದಂತೆ ವಿವಿಧ ದಾಖಲೆಗಳನ್ನು ಇಟ್ಟುಕೊಂಡು ವಿಚಾರಣೆ ನಡೆಸಲು ಲೋಕಾಯುಕ್ತ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಇದೇ ವೇಳೆ ಕೆ ಎಸ್ ಡಿ ಎಲ್ ನಲ್ಲಿ ನಡೆದ ಅಕ್ರಮ, ಟೆಂಡರಿಂಗ್ ಬಗ್ಗೆಯೂ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.