alex Certify BIG NEWS: ವಂಚನೆ ಪ್ರಕರಣದಲ್ಲಿ ಮಂತ್ರಿ ಡೆವಲಪರ್ಸ್ ವ್ಯವಸ್ಥಾಪಕ ನಿರ್ದೇಶಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಂಚನೆ ಪ್ರಕರಣದಲ್ಲಿ ಮಂತ್ರಿ ಡೆವಲಪರ್ಸ್ ವ್ಯವಸ್ಥಾಪಕ ನಿರ್ದೇಶಕ ಅರೆಸ್ಟ್

ಫ್ಲ್ಯಾಟ್ ನಿರ್ಮಿಸಿ ಕೊಡುವುದಾಗಿ ಹೇಳಿ ಹಣ ಹೂಡಿಕೆ ಮಾಡಿಸಿಕೊಂಡ ಬಳಿಕ ವಂಚನೆ ಮಾಡಿದ ಪ್ರಕರಣದಲ್ಲಿ ಮಂತ್ರಿ ಡೆವಲಪರ್ಸ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಮಂತ್ರಿ ಹಾಗೂ ಅವರ ಪುತ್ರ ಪ್ರತೀಕ್ ಮಂತ್ರಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

2019ರಲ್ಲಿ ಈ ಕುರಿತಂತೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದನ್ನು ತನಿಖೆಗಾಗಿ ಸಿಐಡಿ ಗೆ ವರ್ಗಾಯಿಸಲಾಗಿತ್ತು. ಈ ಹಿನ್ನಲೆಯಲ್ಲಿ ಇದೀಗ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 12ರ ವರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ಈ ಪ್ರಕರಣದಲ್ಲಿ ಕೆಲವು ಬ್ಯಾಂಕ್ ಸಿಬ್ಬಂದಿಯೂ ಸಹ ಶಾಮೀಲಾಗಿದ್ದಾರೆ ಎನ್ನಲಾಗಿದ್ದು, ಈ ಕುರಿತು ಸಹ ಸಿಐಡಿ ತನಿಖೆ ನಡೆಸುತ್ತದೆ. ಮಂತ್ರಿ ಡೆವಲಪರ್ಸ್ ವ್ಯವಸ್ಥಾಪಕ ನಿರ್ದೇಶಕ ಸುಶೀಲ್ ಮಂತ್ರಿ ಅಕ್ರಮ ಹಣ ವರ್ಗಾವಣೆ ಕಾಯಿದೆ ಅನ್ವಯ ಜಾರಿ ನಿರ್ದೇಶನಾಲಯದಿಂದ ಕೂಡ ಈ ಹಿಂದೆ ಬಂಧನಕ್ಕೊಳಗಾಗಿದ್ದು, ಕೆಲ ದಿನಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...