ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ರಾಜ್ಯ ಪ್ರವಾಸದ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ರಾಜ್ಯ ಪ್ರವಾಸದ ಬಗ್ಗೆ ಜನರು ತೀರ್ಮಾನ ಮಾಡಬೇಕು. ರಾಜ್ಯದಲ್ಲಿ ಪ್ರವಾಹ, ಕೋವಿಡ್ ಬಂದ ಸಂದರ್ಭದಲ್ಲಿ ಪ್ರಧಾನಿ ಮೋದಿ ಭೇಟಿ ನೀಡಿಲ್ಲ, ಜನ ಸಂಕಷ್ಟದಲಿದ್ದಾಗ ಬರಲಿಲ್ಲ. ಈಗ ಸಫಾರಿ ಸೂಟ್ ಹಾಕಿಕೊಂಡು ಬಮ್ದಿದ್ದಾರೆ. ಇದರಿಂದ ಕನ್ನಡಿಗರಿಗೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.
ವನ್ಯಜೀವಿಗಳ ರಕ್ಷಣೆ ಜೊತೆಗೆ ಮಾನವ ರಕ್ಷಣೆ ಆಘಬೇಕಲ್ಲವೇ? ವನ್ಯಜೀವಿಗಳಿಂದ ಸಾಕಷ್ಟು ಜನರು ಜೀವ ಕಳೆದುಕೊಂಡಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ನೆರವಾಗುವ ಕಾರ್ಯಕ್ರಮ ಮಾಡಬೇಕಾಗಿತ್ತು. ಅದನ್ನು ಬಿಟ್ಟು ಸಫಾರಿ ಮಾಡುತ್ತಿದ್ದಾರೆ. ವನ್ಯಜೀವಿಗಳನ್ನು ನೋಡಿದ ತಕ್ಷಣ ಬಿಜೆಪಿಗೆ ಮತಹಾಕಿ ಬಿಡ್ತಾರಾ? ಎಂದು ಟೀಕಿಸಿದ್ದಾರೆ