ಬೆಂಗಳೂರು: ಮಾಜಿ ಸಿಎಂ , ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವಿಚಾರ ಆಗಾಗ ಚರ್ಚೆಗೆ ಬರುತ್ತಲೇ ಇದೆ. ಇದೀಗ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆ ಬಗ್ಗೆ ಅವರ ಪುತ್ರ ಶಾಸಕ ಯತೀಂದ್ರ ಸಿದ್ದರಾಮಯ್ಯ ಸುಳಿವು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ವರುಣಾ ಕ್ಷೇತ್ರದಿಂದ ಅಪ್ಪ ನಿಂತರೆ ನಾನು ಎಲ್ಲೂ ಸ್ಪರ್ಧೆ ಮಾಡಲ್ಲ. ಪಕ್ಷದ ಕಾರ್ಯಕರ್ತನಾಗಿ ಕ್ಷೇತ್ರ ಬಿಟ್ಟು ಕೊಡಲು ಸಿದ್ಧ ಎಂದು ಹೇಳಿದ್ದಾರೆ.
ಒಂದು ವೇಳೆ ಅಪ್ಪ ವರುಣಾದಲ್ಲಿ ನಿಂತರೆ ಅವರ ಪರವಾಗಿ ಕೆಲಸ ಮಾಡಬೇಕಾಗುತ್ತದೆ. ಹಾಗಾಗಿ ನಾನು ಬೇರೆ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಲ್ಲ. ಕ್ಷೇತ್ರ ತ್ಯಾಗ ಅಂತೇನಿಲ್ಲ ಒಂದು ವೇಳೆ ಅಪ್ಪ ಬಾದಾಮಿ ಬಿಟ್ಟು ಬೇರೆ ಕ್ಷೇತ್ರದಲ್ಲಿ ನಿಲ್ಲುತ್ತೇನೆ ಎಂದರೆ ಬೇರೆಯವರೂ ಕ್ಷೇತ್ರ ಬಿಟ್ಟು ಕೊಡುತ್ತಾರೆ. ವರುಣಾ ಕ್ಷೇತ್ರ ಅಥವಾ ಬೇರೆ ಕಡೆಯಿಂದ ಅವರು ಸ್ಪರ್ಧಿಸಬಹುದು ಅಪ್ಪ ಇನ್ನೂ ಕ್ಷೇತ್ರ ನಿರ್ಧಾರ ಮಾಡಿಲ್ಲ ಎಂದು ತಿಳಿಸಿದ್ದಾರೆ.