ಮೈಸೂರು: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆ ರಾಜಕೀಯ ನಾಯಕರ ವಾಕ್ಸಮರ ತಾರಕಕ್ಕೇರಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಸೋಲುವ ಭೀತಿ ಆರಂಭವಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ವರುಣಾದಲ್ಲಿ ಬಂದು ಥಕತೈ ಅಂತಿದ್ರು, ಗೆಲುವು ನನ್ನದೇ ಎಂದು ಓಡಾಡುತ್ತಿದ್ರು. ಅವರ ಓಟಕ್ಕೆ ಬ್ರೇಕ್ ಹಾಕಲು ವಸತಿ ಸಚಿವ ವಿ. ಸೋಮಣ್ಣ ಅವರನ್ನು ಬಿಜೆಪಿ ಹೈಕಮಾಂಡ್ ಕಣಕ್ಕಿಳಿಸಿದೆ. ಹಾಗಾಗಿ ಸಿದ್ದರಾಮಯ್ಯನವರಿಗೆ ಸೋಲಿನ ಭೀತಿ ಆರಂಭವಾಗಿದೆ ಎಂದರು.
ಸೋಲುವ ಆತಂಕದಿಂದಾಗಿ ಸಿದ್ದರಾಮಯ್ಯ ಮೊಮ್ಮಗನನ್ನು ಪ್ರಚಾರಕ್ಕೆ ಕರೆ ತಂದಿದ್ದಾರೆ. ಇನ್ನೂ 18 ವರ್ಷವೂ ಆಗದ ಮೊಮ್ಮಗನನ್ನು ಕರೆದುಕೊಂಡು ಬಂದು ಭಾವನಾತ್ಮಕವಾಗಿ ಮತಗಳನ್ನು ಸೆಳೆಯಲು ಮುಂದಾಗಿದ್ದಾರೆ. ಅದೇನೇ ಮಾಡಿದರೂ ವರುಣಾದಲ್ಲಿ ಸಿದ್ದರಾಮಯ್ಯ ಸೋಲನುಭವಿಸಲಿದ್ದಾರೆ ಎಂದು ಹೇಳಿದರು.