ಬಳ್ಳಾರಿ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಅದ್ಭುತ ಜನಬೆಂಬಲ ಸಿಗುತ್ತಿದ್ದು, ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ವರುಣಾದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಸ್ಪರ್ಧೆ ವಿಚಾರವಾಗಿ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ. ಇನ್ನೂ ಇತ್ಯರ್ಥಗೊಂಡಿಲ್ಲ ಎಂದು ಹೇಳಿದರು.
ಬಿಜೆಪಿ ಅಭ್ಯರ್ಥಿಗಳ ಪಟ್ಟಿ ವಿಚಾರವಾಗಿಯೂ ಚರ್ಚೆ ನಡೆದಿದೆ. ಎಲ್ಲರಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.