BIG NEWS: ವರುಣಾದಲ್ಲಿ ಸಿದ್ದರಾಮಯ್ಯರನ್ನ ಸೋಲಿಸುವ ಜವಾಬ್ದಾರಿ ನನ್ನದು ಎಂದ ಬಿ.ಎಸ್. ಯಡಿಯೂರಪ್ಪ

ಬಾಗಲಕೋಟೆ: ವಿಧಾನಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ಪರಸ್ಪರ ಸವಾಲಿನ ಮೂಲಕ ಜಿದ್ದಾಜಿದ್ದಿಗೆ ಇಳಿದಿದ್ದಾರೆ. ಹೈವೋಲ್ಟೇಜ್ ಕ್ಷೇತ್ರವಾಗಿರುವ ವರುಣಾದಲ್ಲಿ ಸಿದ್ದರಾಮಯ್ಯನವರನ್ನು ಸೋಲಿಸುವ ಜವಾಬ್ದಾರಿ ನನ್ನದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬಹಿರಂಗವಾಗಿ ಸವಾಲು ಹಾಕಿದ್ದಾರೆ.

ಬಾಗಲಕೋಟೆಯ ಬಾದಾಮಿಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಬಾದಾಮಿಯಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರದ್ದು, ಮತದಾರರದ್ದು, ವರುಣಾದಲ್ಲಿ ಸಿದ್ದರಾಮಯ್ಯನವರನ್ನು ಸೋಲಿಸುವ ಜವಾಬ್ದಾರಿ ನನ್ನದು. ಬಾದಾಮಿ ಬಿಟ್ಟು ವರುಣಾ ಕ್ಷೇತ್ರಕ್ಕೆ ಹೋಗಿರುವ ಸಿದ್ದರಾಮಯ್ಯ ಅಲ್ಲಿ ಸೋಲುವುದು ಖಚಿತ ಎಂದು ಹೇಳಿದರು.

ಕಾಂಗ್ರೆಸ್ ನಡೆಸುತ್ತಿರುವ ಅಪಪ್ರಚಾರವನ್ನು ವೀರಶೈವ ಲಿಂಗಾಯಿತರು ನಂಬಬಾರದು. ವಿರೇಂದ್ರ ಪಾಟೀಲ್ ಸೇರಿದಂತೆ ಹಲವು ಲಿಂಗಾಯಿತ ನಾಯಕರಿಗೆ ಕಾಂಗ್ರೆಸ್ ಮೋಸ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read