ಬೆಂಗಳೂರು: ವಿಧಾನಸಭಾ ಚುನಾವಣಾ ಅಖಾಡ ಕಾವೇರುತ್ತಿದ್ದು, ರಾಜಕೀಯ ಪಕ್ಷಗಳ ನಾಯಕರು ತಮ್ಮ ಎದುರಾಳಿ ಸ್ಪರ್ಧಿಯ ಬಗ್ಗೆ ಲೆಕ್ಕಾಚಾರ ಆರಂಭಿಸಿದ್ದಾರೆ. ವರುಣಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧಿಸಿದ್ದು, ಸಿದ್ದರಾಮಯ್ಯಗೆ ಎದುರಾಳಿಯಾಗಿ ಬಿಜೆಪಿ-ಜೆಡಿಎಸ್ ನಿಂದ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದೇ ಸದ್ಯದ ಕುತೂಹಲ.
ವರುಣಾದಿಂದ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಸ್ಪರ್ಧೆ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ವಿಜಯೇಂದ್ರ ಆದರೂ ಬರಲಿ ಯಾರಾದರೂ ಆಗಲಿ ಎದುರಾಳಿ ಯಾರು ಎಂಬುದು ಮುಖ್ಯವಲ್ಲ, ಜನರ ಅಭಿಪ್ರಾಯ ಮುಖ್ಯ ಎಂದಿದ್ದಾರೆ.
ಎದುರಾಳಿ ಯಾರೇ ಬರಲಿ ತಲೆಕೆಡಿಸಿಕೊಳ್ಳಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಡಿ.ಕೆ. ಶಿವಕುಮಾರ್, ವರುಣಾದಲ್ಲಿ ಸ್ವತಃ ಯಡಿಯೂರಪ್ಪನವರೇ ಎದುರಾಳಿಯಾಗಿ ಬಂದ್ರೂ ಸ್ವಾಗತ ಮಾಡುತ್ತೇವೆ ಎಂದು ಅಖಾಡಕ್ಕೆ ಸ್ವಾಗತಿಸಿದ್ದಾರೆ.