alex Certify BIG NEWS: ವರುಣಾದಿಂದಲೂ ವಿಜಯೇಂದ್ರ ಕಣಕ್ಕಿಳಿಸಲು ಬಿಜೆಪಿ ಪ್ಲಾನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವರುಣಾದಿಂದಲೂ ವಿಜಯೇಂದ್ರ ಕಣಕ್ಕಿಳಿಸಲು ಬಿಜೆಪಿ ಪ್ಲಾನ್

ಬೆಂಗಳೂರು: ವಿಧಾನಸಭಾ ಚುನಾವಣೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ನಡುವೆ ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕಟ್ಟಿ ಹಾಕಲು ಆಡಳಿತರೂಢ ಬಿಜೆಪಿ ಭರ್ಜರಿ ಪ್ಲಾನ್ ಮಾಡಿದ್ದು, ಒಂದು ವೇಳೆ ಸಿದ್ದರಾಮಯ್ಯ ವರುಣಾದಲ್ಲಿ ನಿಂತರೆ ಪ್ರಬಲ ಪ್ರತಿಸ್ಪರ್ಧಿ ಕಣಕ್ಕಿಳಿಸಲು ಲೆಕ್ಕಾಚಾರ ಹಾಕಿದೆ.

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ ಖಚಿತವಾದರೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರನ್ನು ವರುಣಾದಿಂದಲೂ ಕಣಕ್ಕಿಳಿಸಲು ಬಿಜೆಪಿ ಯೋಜನೆ ರೂಪಿಸಿದೆ. ಶಿಕಾರಿಪುರದ ಜೊತೆಗೆ ವರುಣಾದಿಂದಲೂ ವಿಜಯೇಂದ್ರ ಸ್ಪರ್ಧಿಸಲು ಚಿಂತನೆ ನಡೆಸಲಾಗಿದೆ.

ಒಂದು ವೇಳೆ ಸಿದ್ದರಾಮಯ್ಯ ಹಾಲಿ ಕ್ಷೇತ್ರ ಬಾದಾಮಿಯಿಂದಲೇ ಸ್ಪರ್ಧಿಸಿದರೆ ಶ್ರೀರಾಮುಲು ಅವರನ್ನು ಬಾದಾಮಿಯಿಂದ ಕಣಕ್ಕಿಳಿಸಲು ಪ್ಲಾನ್ ರೂಪಿಸಿದೆ. ಒಟ್ಟಾರೆ ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರದಲ್ಲಿ ಬಿಜೆಪಿ ಪ್ರಬಲಸ್ಪರ್ಧಿ ಕಣಕ್ಕಿಳಿಸುವ ಮೂಲಕ ಟಕ್ಕರ್ ಕೊಡಲು ಬಿಜೆಪಿ ಮುಂದಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...