ವಿಜಯನಗರ: ವಿಜಯನಗರ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು, 80ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಕುಸಿತಗೊಂಡಿದ್ದು, ಕುಂಟುಬದವರು ಆಶ್ರಯವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲೆಯ ಕೂಡ್ಲಗಿ, ಹೂವಿನಹಡಗಲಿ, ಕೊಟ್ಟೂರು ತಾಲೂಕಿನಲ್ಲಿ ಧಾರಾಕಾರ ಮಳೆಗೆ ಮನೆಗಳು ನೆಲಸಮವಾಗಿವೆ. ಮಳೆ ಅವಾಂತರಕ್ಕೆ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಸ್ತೆಗಳು, ಸೇತುವೆಗಳು ನದಿಯಂತಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ವಿಜಯನಗರ ಜಿಲ್ಲೆಯಲ್ಲಿ 500 ಹೆಕ್ಟೇರ್ ಪ್ರದೇಶಗಳಲ್ಲಿ ಬೆಳೆ ನಾಶವಾಗಿದೆ. 22 ಗ್ರಾಮಗಳ ನದಿ ಪಾತ್ರದ ಜನರನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಸೂಚಿಸಿದೆ.