ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಿಪಕ್ಷ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದ್ದು, ಪ್ರತಿಪಕ್ಷಗಳ ಅಭ್ಯರ್ಥಿಗಳನ್ನು ಮಣಿಸಲು ಇನ್ನಿಲ್ಲದ ಕಸರತ್ತು ನಡೆಸಿದೆ.
ವಲಸೆ ಶಾಕರಿಗೆ ಕೌಂಟರ್ ನೀಡಲು ಸಿದ್ಧತೆ ನಡೆಸಿರುವ ಕಾಂಗ್ರೆಸ್ ಪ್ರತಿಪಕ್ಷಗಳ ಅಭ್ಯರ್ಥಿಗಳ ವಿರುದ್ಧ ಖಡಕ್ ಕ್ಯಾಂಡಿಡೇಟ್ ಕಣಕ್ಕಿಳಿಸುವ ತಂತ್ರ ಹೆಣೆದಿದೆ. ಈ ನಿಟ್ಟಿನಲ್ಲಿ ತೆರೆಮರೆಯಲ್ಲಿ ಅಭ್ಯರ್ಥಿ ಫೈನಲ್ ಮಾಡುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಯೋಜನೆ ರೂಪಿಸಿದ್ದಾರೆ.
ಕಾಂಗ್ರೆಸ್ ತೊರೆದ ಮುನಿರತ್ನ ಬಿಜೆಪಿಗೆ ಸೇರ್ಪಡೆಯಾಗಿರುವ ಹಿನ್ನೆಲೆಯಲ್ಲಿ ಆರ್.ಆರ್. ನಗರದಲ್ಲಿ ಕಾಂಗ್ರೆಸ್ ಡಿ.ಕೆ. ಸುರೇಶ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ.
ಆರ್.ಆರ್. ನಗರದಲ್ಲಿ ಮುನಿರತ್ನ ಎದುರಿಸಲು ಕುಸುಮಾರಿಗೆ ಕಷ್ಟಸಾಧ್ಯ. ಹೀಗಾಗಿ ಡಿ.ಕೆ. ಸುರೇಶ್ ಕಣಕ್ಕಿಳಿದರೆ ಕಾರ್ಯಕರ್ತರಲ್ಲಿಯೂ ಧೈರ್ಯ ಬರುತ್ತದೆ. ಮತ ಧ್ರುವೀಕರಣವೂ ಆಗಲಿದೆ ಎಂಬುದು ಕಾಂಗ್ರೆಸ್ ಲೆಕ್ಕಾಚಾರ ಎನ್ನಲಾಗಿದೆ.