alex Certify BIG NEWS: ವಲಸೆ ಶಾಸಕರು ಮರಳಿ ಕಾಂಗ್ರೆಸ್ ಗೆ ವಿಚಾರ; ಸಚಿವ ಸುಧಾಕರ್ ಹೇಳಿದ್ದೇನು? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಲಸೆ ಶಾಸಕರು ಮರಳಿ ಕಾಂಗ್ರೆಸ್ ಗೆ ವಿಚಾರ; ಸಚಿವ ಸುಧಾಕರ್ ಹೇಳಿದ್ದೇನು?

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉತ್ತರ-ದಕ್ಷಿಣ ಆಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಲೇವಡಿ ಮಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಸಿದ್ದರಾಮಯ್ಯ ಉತ್ತರ ಕರ್ನಾಟಕ ಭಾಗದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ. ಡಿ.ಕೆ.ಶಿವಕುಮಾರ್ ದಕ್ಷಿಣ ಕರ್ನಾಟಕ ಭಾಗದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಪಕ್ಷ ಈಗಾಗಲೇ ಎರಡು ಬಣಗಳಾಗಿ ಪ್ರಚಾರ ಮಾಡುತ್ತಿದೆ. ಸಿದ್ದರಾಮಯ್ಯ-ಡಿಕೆಶಿ ಉತ್ತರ-ದಕ್ಷಿಣ ಇದು ಹೊಸದೇನಲ್ಲ ಎಂದು ಹೇಳಿದರು.

ಇದೇ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ವಲಸೆ ಬಂದ ಶಾಸಕರು ಮರಳಿ ಕಾಂಗ್ರೆಸ್ ಗೆ ಹೋಗುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸುಧಾಕರ್, ವಲಸೆ ಬಂದ ಯಾವುದೇ ಶಾಸಕರು, ಸಚಿವರು ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ. ಅಂತಹ ಯಾವ ಚರ್ಚೆಯೂ ನಡೆದಿಲ್ಲ. ಹೆಚ್.ವಿಶ್ವನಾಥ್ ಕೂಡ ಕಾಂಗ್ರೆಸ್ ಗೆ ಹೋಗಲ್ಲ, ಅವರು ಚುನಾವಣೆಯಲ್ಲಿ ಸೋತಿದ್ದರೂ ಕೂಡ ಅವರನ್ನು ಎಂ ಎಲ್ ಸಿ ಮಾಡಿದ್ದೇವೆ. ಹಾಗಾಗಿ ಅವರು ಕೂಡ ವಾಪಸ್ ಹೋಗುವುದಿಲ್ಲ ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...