ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ ಸಿಎಂ ಸ್ಥಾನದ ಆಕಾಂಕ್ಷಿಗಳು ಕಾಶಿ ವಿಶ್ವನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಎರಡು ದಿನಗಳ ಹಿಂದೆ ಗಣಿ ಸಚಿವ ಮುರುಗೇಶ್ ನಿರಾಣಿ ಕಾಶಿ ವಿಶ್ವನಾಥ ದೇವರ ದರ್ಶನ ಪಡೆದು ವಾಪಸ್ ಆಗಿದ್ದ ಬೆನ್ನಲ್ಲೇ ಇದೀಗ ಶಾಸಕ ಅರವಿಂದ್ ಬೆಲ್ಲದ್ ಉತ್ತರ ಪ್ರದೇಶದ ವಾರಣಾಸಿಗೆ ತೆರಳಿದ್ದು, ಕಾಶಿಗೆ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿರುವ ಇಬ್ಬರು ನಾಯಕರು ಕಾಶಿ ಯಾತ್ರೆ ಮಾಡಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಇಮ್ಮಡಿಗೊಳಿಸಿದೆ.
ಶಾಕಿಂಗ್: ಕೊರೊನಾದಿಂದ ಅನಾಥರಾದ 15 ಲಕ್ಷ ಮಕ್ಕಳು….!
ಸಿಎಂ ಬದಲಾವಣೆ ಮಾತು ಭಾರಿ ಚರ್ಚೆಯಲ್ಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಚಿವ ನಿರಾಣಿ, ಅರವಿಂದ್ ಬೆಲ್ಲದ್ ಹೆಸರು ಪ್ರಮುಖವಾಗಿ ಕೇಳಿಬರುತ್ತಿದ್ದು, ನಿರಾಣಿ ಕಾಶಿ ವಿಶ್ವನಾಥ ಮಂದಿರಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಇಂದು ಶಾಸಕ ಬೆಲ್ಲದ್ ಕಾಶಿಗೆ ತೆರಳಿರುವುದು ಅಚ್ಚರಿ ಮೂಡಿಸಿದೆ.