ಬೆಂಗಳೂರು: ವಾಹನ ಚಾಲನೆ ವೇಳೆ ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಭಾರಿ ಪ್ರಮಾಣದ ದಂಡ ಪಾವತಿಸಬೇಕು ಎಂದು ಡಿಜಿ-ಐಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಹನ ಚಾಲನೆ ವೇಳೆ ಸೀಟ್ ಬೆಲ್ಟ್ ಕಡ್ಡಾಯ ಮಾಡಲಾಗಿದೆ. ಸೀಟ್ ಬೆಲ್ಟ್ ಧರಿಸದೇ ನಿಯಮ ಉಲ್ಲಂಘನೆ ಮಾಡಿದರೆ 1000 ರೂಪಾಯಿ ದಂಡ ಪಾವತಿಸಬೇಕು. ಹೊಸ ನಿಯಮ ಇಂದಿನಿದಲೇ ಜಾರಿಗೆ ಬರಲಿದೆ ಎಂದು ತಿಳಿಸಿದರು.