ಚಿಕ್ಕಬಳ್ಳಾಪುರ: ವೀಕೆಂಡ್ ಪ್ರವಾಸಕ್ಕೆಂದು ಬಂದಿದ್ದ ಯುವಕ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಮೊಹಮ್ಮದ್ ಯಾಸೀನ್ ಮೃತ ಯುವಕ. ಬೆಂಗಳೂರಿನ ಶ್ಯಾಂಪುರ ನಿವಾಸಿಯಾಗಿದ್ದ ಯುವಕ ಸ್ನೇಹಿತರೊಂದಿಗೆ ವೀಕೆಂಡ್ ಪ್ರವಾಸಕ್ಕೆಂದು ಬಂದಿದ್ದ. ಈ ವೇಳೆ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಈಜಲು ಹೋಗಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.