ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೊಸ ರೂಪಾಂತರಿ ಒಮಿಕ್ರಾನ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಸುಧಾಕರ್, ಕೋವಿಡ್ ನಿಯಂತ್ರಣದ ಬಗ್ಗೆ ರಾಜ್ಯ ಸರ್ಕಾರ ಯಾವುದೇ ನಿರ್ಲಕ್ಷ್ಯ ಮಾಡುತ್ತಿಲ್ಲ. ಕಾಲ ಕಾಲಕ್ಕೆ ಸಭೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೊರೊನಾ ಪ್ರಕರಣ ನೋಡಿಕೊಂಡು ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಗಮನಿಸಿ: ಇಂದಿನಿಂದ ಬದಲಾಗಿದೆ ಈ ಎಲ್ಲ ನಿಯಮ
ವಿದೇಶಗಳಿಂದ ಆಗಮಿಸುವ ಪ್ರತಿಯೊಬ್ಬರಿಗೂ ಕಡ್ಡಾಯ ಕೋವಿಡ್ ಟೆಸ್ಟ್ ಮಾಡುವಂತೆ ಸೂಚಿಸಲಾಗಿದೆ. ಟೆಸ್ಟ್ ವರದಿ ನೆಗೆಟಿವ್ ಬಂದರೆ ಹೋಂ ಕ್ವಾರಂಟೈನ್ ಮಾಡಲಾಗುವುದು. ಕ್ವಾರಂಟೈನ್ ನ 5ನೇ ದಿನ ಮತ್ತೊಮ್ಮೆ ಟೆಸ್ಟ್ ಮಾಡಲಾಗುವುದು. ಆಗಲೂ ಕೋವಿಡ್ ನೆಗೆಟಿವ್ ಬಂದರೆ ಕ್ವಾರಂಟೈನ್ ನಿಂದ ರಿಲೀಸ್ ಮಾಡಲಾಗುವುದು. ಪಾಸಿಟಿವ್ ಬಂದರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುವುದು ಎಂದರು.
ಇನ್ನು ಲಸಿಕೆ ಪಡೆಯದವರಿಗೆ ಸರ್ಕಾರಿ ಸೌಲಭ್ಯ ನೀಡದ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವರು ಇಂಥಹ ಯಾವುದೇ ಶಿಫಾರಸ್ಸನ್ನೂ ಒಪ್ಪುವುದಿಲ್ಲ ಎಂದು ಸ್ಪಷ್ಟಪಡಿಸಿದರು.