ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ದಂಧೆ ನಿಯಂತ್ರಣಕ್ಕೆ ಬಾರದಿದ್ದರೆ ಪೊಲೀಸರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ ನೀಡಿದ್ದಾರೆ.
ವಿಧಾನಪರಿಷತ್ ನಲ್ಲಿ ರಾಜ್ಯದಲ್ಲಿನ ಡ್ರಗ್ಸ್ ದಂಧೆ ಪ್ರಕರಣ ಪ್ರತಿಧ್ವನಿಸಿದ್ದು, ಈ ವೇಳೆ ಮಾತನಾಡಿದ ಗೃಹ ಸಚಿವರು, ಡ್ರಗ್ಸ್ ದಂಧೆ ವಿರುದ್ಧ ಸಿಸಿಬಿ ಅಧಿಕಾರಿಗಳು ಸಮರ ಸಾರಿದ್ದಾರೆ. ಪ್ರತಿ ದಿನ ಎರಡು ಮೂರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುತ್ತಿದ್ದಾರೆ. ನೈಜೀರಿಯನ್ ಪ್ರಜೆಗಳು ಈ ದಂಧೆಯಲ್ಲಿ ಹೆಚ್ಚು ತೊಡಗಿಕೊಂಡಿದ್ದಾರೆ. ವಿದೇಶಿಗರು, ಡ್ರಗ್ಸ್ ದಂಧೆಕೋರರಿಗೆ ನಮ್ಮ ದೇಶ, ರಾಜ್ಯ ಧರ್ಮಛತ್ರವಲ್ಲ ಎಂದು ಹೇಳಿದರು.
ತನ್ನ ಮೇಲಾದ ಲೈಂಗಿಕ ದೌರ್ಜನ್ಯದ ಕರಾಳ ಕಥೆಯನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಖ್ಯಾತ ನಟಿ
ಅಕ್ರಮವಾಗಿ ರಾಜ್ಯದಲ್ಲಿ ಬೀಡುಬಿಟ್ಟಿರುವ ವಿದೇಶಿಗರು ಹಾಗೂ ಡ್ರಗ್ಸ್ ದಂಧೆಕೋರರ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಪ್ರತಿ ಪೊಲೀಸ್ ಸ್ಟೇಷನ್ ಗಳಲ್ಲೂ ರಿಜಿಸ್ಟರ್ ನಿರ್ವಹಿಸಲು ಸೂಚಿಸಲಾಗಿದೆ. ಬಹುತೇಕ ಅಕ್ರಮ ವಿದೇಶಿಗರು ಡ್ರಗ್ಸ್ ಪೆಡ್ಲರ್ ಗಳಾಗಿದ್ದಾರೆ. ಮಾದಕ ವಸ್ತು ನಿಯಂತ್ರಣ ಕಾಯ್ದೆಯಡಿ ಈವರೆಗೆ 8000ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದರು.
ನೈಜೀರಿಯನ್ ಹೆಣ್ಣುಮಕ್ಕಳನ್ನು ನಿಯಂತ್ರಿಸುವುದು ಪೊಲೀಸರಿಗೂ ಕಷ್ಟಕರ. ಡ್ರಗ್ಸ್ ಪಿಡುಗು ನಿಯಂತ್ರಣಕ್ಕೆ ಬರದಿದ್ದರೆ ಪೊಲೀಸರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.