ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022-23 ನೇ ಸಾಲಿಕ ಕೇಂದ್ರ ಬಜೆಟ್ ಮಂಡನೆ ಮಾಡುತ್ತಿದ್ದು, ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಶೈಕ್ಷಣಿಕ ಚಟುವಟಿಕೆಗಳಿಂದ ವವಂಚಿತರಾಗಿದ್ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಶಿಕ್ಷಣವನ್ನು ಡಿಜಿಟಲ್ ಮಾಡುವ ನಿಟ್ಟಿನಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳಿಗೆ ಒನ್ ಕ್ಲಾಸ್ – ಒನ್ ಚಾನೆಲ್ ಘೋಷಣೆಯನ್ನು ಮಾಡಲಾಗಿದೆ.
1 ರಿಂದ 12 ನೇ ತರಗತಿವರೆಗಿನ ಮಕ್ಕಳಿಗೆ ಈ ಚಾನೆಲ್ ಮುಖಾಂತರ ಶಿಕ್ಷಣವನ್ನು ಒದಗಿಸುವುದು ಸರ್ಕಾರದ ಉದ್ದೇಶವಾಗಿದೆ.