ಬೆಂಗಳೂರು: ವಿದ್ಯಾರ್ಥಿಗಳಿಗೆ ಅಶ್ಲೀಲ ವಿಡಿಯೋ ಸಂದೇಶ ಕಳುಹಿಸುತ್ತಿದ್ದ ಬೆಂಗಳೂರಿನ ಪ್ರತಿಷ್ಠಿತ ಕಾಲೇಜು ಪ್ರೊಫೆಸರ್ ಓರ್ವರನ್ನು ಅಮಾನತುಗೊಳಿಸಲಾಗಿದೆ.
ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರೊಫೆಸರ್ ಮಧುಸೂಧನ್ ಆಚಾರ್ಯ ಅಮಾನತುಗೊಂಡಿರುವ ಪ್ರೊಫೆಸರ್. ವಿದ್ಯಾರ್ಥಿಗಳಿಗೆ ಅಶ್ಲೀಲ ವಿಡಿಯೋ ಸಂದೇಶ ಕಳುಹಿಸುತ್ತಿದ್ದ ಹಿನ್ನೆಲೆಯಲ್ಲಿ ಬಾಗಲೂರು ಕ್ರಾಸ್ ಬಳಿಯ ನಿಟ್ಟೆ ಮೀನಾಕ್ಷಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯಿಂದ ಆದೇಶ ಹೊರಡಿಸಲಾಗಿದೆ.
ಪ್ರಕರಣ ಸಂಬಂಧ ಈಶಾನ್ಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಸೈಬರ್ ಟಿಪ್ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಕಾಲೇಜು ಆಡಳಿತ ಮಂಡಳಿಯಿಂದ ಪ್ರೊಫೆಸರ್ ಮಧುಸೂಧನ್ ಆಚಾರ್ಯ ರನ್ನು ಸಸ್ಪೆಂಡ್ ಮಾಡಲಾಗಿದೆ.