ಮೈಸೂರಿನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣದ ಐವರು ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ತಲೆಮರೆಸಿಕೊಂಡಿರುವ ಮತ್ತೊಬ್ಬನ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿದೆ. ಇವರೆಲ್ಲರೂ ತಮಿಳುನಾಡಿನಿಂದ ಗೂಡ್ಸ್ ವಾಹನದಲ್ಲಿ ಮೈಸೂರು ಹಾಗೂ ಬೆಂಗಳೂರಿನ ಮಂಡಿಗಳಿಗೆ ಬಾಳೆ ತರುತ್ತಿದ್ದ ಕೆಲಸಗಾರರು ಎಂದು ಹೇಳಲಾಗಿದೆ.
ಮೈಸೂರಿಗೆ ಬಂದ ಸಂದರ್ಭದಲ್ಲಿ ಇವರುಗಳು ಅತ್ಯಾಚಾರ ಕೃತ್ಯ ನಡೆದಿರುವ ಪ್ರದೇಶದಲ್ಲಿ ಮದ್ಯ ಸೇವನೆ ಮಾಡುತ್ತಿದ್ದರೆನ್ನಲಾಗಿದ್ದು, ಈ ವೇಳೆ ವಿದ್ಯಾರ್ಥಿನಿ ಹಾಗೂ ಆಕೆಯ ಸ್ನೇಹಿತನನ್ನು ಗಮನಿಸಿ ಅವರುಗಳನ್ನು ಬೆದರಿಸಿ ಹಣ ಕಿತ್ತುಕೊಂಡಿದ್ದಲ್ಲದೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದರೆನ್ನಲಾಗಿದೆ.
ತಮಿಳುನಾಡಿನಲ್ಲಿ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಈಗ ಮೈಸೂರಿನತ್ತ ಕರೆದುಕೊಂಡು ಬರುತ್ತಿದ್ದಾರೆನ್ನಲಾಗಿದ್ದು, ಹೆಚ್ಚಿನ ವಿಚಾರಣೆ ಬಳಿಕ ಮತ್ತಷ್ಟು ಸ್ಪೋಟಕ ಸಂಗತಿಗಳು ಬಹಿರಂಗವಾಗುವ ಸಾಧ್ಯತೆಯಿದೆ.