alex Certify BIG NEWS: ವಿದ್ಯಾಸಿರಿ ಯೋಜನೆಗೆ ಹಣವಿಲ್ಲ; ಬಿಸಿಯೂಟಕ್ಕೂ ಕಲ್ಲು ಹಾಕಿದ ಸರ್ಕಾರ; ಈಗ ಸೈಕಲ್, ಶೂ, ಸಾಕ್ಸ್ ನ್ನು ಕಿತ್ತುಕೊಂಡಿದೆ; ವಿದ್ಯಾರ್ಥಿಗಳ ಭವಿಷ್ಯದ ಜತೆ ಬಿಜೆಪಿ ಸರ್ಕಾರದ ಚೆಲ್ಲಾಟ; ಸಿದ್ದರಾಮಯ್ಯ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯಾಸಿರಿ ಯೋಜನೆಗೆ ಹಣವಿಲ್ಲ; ಬಿಸಿಯೂಟಕ್ಕೂ ಕಲ್ಲು ಹಾಕಿದ ಸರ್ಕಾರ; ಈಗ ಸೈಕಲ್, ಶೂ, ಸಾಕ್ಸ್ ನ್ನು ಕಿತ್ತುಕೊಂಡಿದೆ; ವಿದ್ಯಾರ್ಥಿಗಳ ಭವಿಷ್ಯದ ಜತೆ ಬಿಜೆಪಿ ಸರ್ಕಾರದ ಚೆಲ್ಲಾಟ; ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಕಳೆದೆರಡು ಶೈಕ್ಷಣಿಕ ವರ್ಷಗಳಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದ ಸೈಕಲ್, ಶೂ ಮತ್ತು ಸಾಕ್ಸ್ ಗಳನ್ನು ರಾಜ್ಯ ಸರ್ಕಾರ ನಿಲ್ಲಿಸಿದೆಯಂತೆ. ಹಿಂದಿನ ವರ್ಷಗಳಲ್ಲಿ ಕೊರೊನಾ ಕಾರಣ ನೀಡಿದ್ದ ಸರ್ಕಾರ ಈ ವರ್ಷ 40% ಕಮಿಷನ್ ನಿಂದಾಗಿ ಖಾಲಿಯಾಗಿರುವ ಖಜಾನೆ ತೋರಿಸುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಒಂದೆಡೆ ರಾಜ್ಯ ಬಿಜೆಪಿ ಸರ್ಕಾರದ ಸಚಿವರು, ಆಡಳಿತ ಪಕ್ಷದ ನಾಯಕರು ಮತ್ತು ಅಧಿಕಾರಿಗಳ ದುಷ್ಟಕೂಟ ಕಮಿಷನ್ ದಂಧೆಯಲ್ಲಿ ತೊಡಗಿಕೊಂಡು ರಾಜ್ಯದ ಖಜಾನೆಯನ್ನು ಲೂಟಿ ಮಾಡುತ್ತಿದ್ದರೆ, ಇನ್ನೊಂದೆಡೆ ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ, ಸೈಕಲ್, ಶೂ, ಸಾಕ್ಸ್ ನೀಡದೆ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಇಂದಿನ ದಿನದ ವರೆಗೆ ಶಾಲಾ ಮಕ್ಕಳಿಗೆ ನೀಡಬೇಕಾಗಿದ್ದ ಪಠ್ಯಪುಸ್ತಕಗಳ ಬಗ್ಗೆ ಖಚಿತ ತೀರ್ಮಾನವನ್ನು ಕೈಗೊಳ್ಳಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಕೆಲವು ಶಾಲೆಗಳಿಗೆ ಹಳೆಯ ಪಠ್ಯ, ಇನ್ನು ಕೆಲವು ಶಾಲೆಗಳಿಗೆ ಹೊಸ ಪಠ್ಯ, ಉಳಿದ ಶಾಲೆಗಳಿಗೆ ಪಠ್ಯವೇ ಇಲ್ಲದಂತಹ ದುಸ್ಥಿತಿ ಇದೆ ಎಂದು ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಕೊರೊನಾ ಕಾಲದ ಕಲಿಕಾ ಅಂತರವನ್ನು ಸರಿದೂಗಿಸಲು ಶಿಕ್ಷಣ ಇಲಾಖೆ “ವಿದ್ಯಾಪ್ರವೇಶ” ಮತ್ತು “ಕಲಿಕಾ ಚೇತರಿಕೆ” ಎಂಬ ಎರಡು ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ. ಆದರೆ ಇದಕ್ಕೆ ಸಂಬಂಧಿಸಿದ ಕಲಿಕಾ ಹಾಳೆಗಳನ್ನು ಕೂಡಾ ಪೂರೈಸಲು ಸರ್ಕಾರದಲ್ಲಿ ದುಡ್ಡಿಲ್ಲ. ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡಿರುವ ಕಲಿಕಾ ಹಾಳೆಗಳನ್ನು ಶಿಕ್ಷಕರು ಸ್ವಂತ ಖರ್ಚಿನಿಂದ ಡೌನ್ ಲೋಡ್ ಮಾಡಿಕೊಂಡು, ಜೆರಾಕ್ಸ್ ಪ್ರತಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಇಷ್ಟೊಂದು ಗತಿಗೇಡಿನ ಸರ್ಕಾರ ಹಿಂದೆ ಇರಲಿಲ್ಲ, ಮಂದೆ ಬರಲಾರದು ಎಂದು ಗುಡುಗಿದ್ದಾರೆ.

ವಿದ್ಯಾರ್ಥಿನಿಯರಿಗೆ ಸೈಕಲ್ ಗಳನ್ನು ನೀಡುವ ಯೋಜನೆ ಹಿಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರದ್ದು, ಆ ಯೋಜನೆಯನ್ನು ಕೂಡಾ ಸ್ಥಗಿತಗೊಳಿಸುವ ಮೂಲಕ ಮುಖ್ಯಮಂತ್ರಿ ಬೊಮ್ಮಾಯಿ ಅವರು ಯಡಿಯೂರಪ್ಪನವರ ವಿರುದ್ಧ ಸೇಡು ತೀರಿಸಿಕೊಳ್ಳಲು ಹೊರಟಿದ್ದಾರೆಯೇ?

ಶಾಲಾ ಬಡ ಮಕ್ಕಳಿಗಾಗಿ ನಮ್ಮ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಒಂದೊಂದಾಗಿ ಸ್ಥಗಿತಗೊಳಿಸಲು ಸರ್ಕಾರ ಹೊರಟಿದೆ. ವಿದ್ಯಾಸಿರಿ ಯೋಜನೆಗೆ ಹಣ ನೀಡುತ್ತಿಲ್ಲ, ಕ್ಷೀರಭಾಗ್ಯ ಮತ್ತು ಮಧ್ಯಾಹ್ನದ ಬಿಸಿಯೂಟಕ್ಕೂ ಕಲ್ಲು ಹಾಕುತ್ತಿದೆ. ಈಗ ಸೈಕಲ್, ಶೂ, ಸಾಕ್ಸ್ ಗಳನ್ನು ಕೂಡಾ ಕಿತ್ತುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Šis patarimas padės jums išvalyti senus riebalus Himalajų ir jūros druskos: kuri yra geriausia? Namų valymas per Užgavėnes: draudžiamos veiklos visą savaitę Kaip išvengti neteisingo Kaip greičiau numesti svorį vaikščiojant: