ಬಾಗಲಕೋಟೆ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಹೊಸ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಸಂಗಮೇಶ್ (20), ಕಿರಣ್ ನಾಯಕ್ (21) ಮೃತ ದುರ್ದೈವಿಗಳು. ಸಂಗಮೇಶ್ ತನ್ನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪಾರ್ಟಿ ಆಯೋಜಿಸಿದ್ದ. ಪಾರ್ಟಿ ಕಾರ್ಯಕ್ರಮ ಮುಗಿಸಿ ಇಂದು ಬೆಳಿಗ್ಗೆ ಮನೆಗೆ ವಾಪಸ್ ಆಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಸ್ಥಳಕ್ಕೆ ಬಾಗಲಕೋಟೆ ಗ್ರಾಮಿಣ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.