ಮೈಸೂರು: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂವರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ವಿತರಿಸಲಾಗಿದೆ.
ಮೈಸೂರು ಜಿಲ್ಲೆ ಟಿ.ನರಸಿಪುರ ತಾಲೂಕಿನ ನೀಲಸೋಗೆ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿದ್ದರು. ಹರೀಶ್ (32), ರಾಚೇಗೌಡ (60) ಹಾಗೂ ಮಹದೇವಸ್ವಾಮಿ (38) ಮೃತರು. ಚೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿಯೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು.
ಘಟನಾ ಸ್ಥಳಕ್ಕೆ ಧಾವಿಸಿದ ಚೆಸ್ಕಾಂ ಅಧಿಕಾರಿಗಳು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಿದ್ದಾರೆ.