ಮಂಡ್ಯ: ವಿದ್ಯುತ್ ತಂತಿ ತುಳಿದು ಯುವ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಅಘಲೆ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.
ಗಿರೀಶ್ (27) ಮೃತ ರೈತ. ಜಾನುವಾರುಗಳಿಗೆ ಮೇವು ತರಲೆಂದು ರೈತ ಜಮೀನಿಗೆ ತೆರಳಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ಸ್ಥಳದಲ್ಲೇ ರೈತ ಸಾವನ್ನಪ್ಪಿದ್ದಾನೆ.
ದುರ್ಘಟನೆಗೆ ಸೆಸ್ಕ್ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.