alex Certify BIG NEWS: ವಿದ್ಯುತ್ ಬಿಲ್ ನಲ್ಲಿ ಅಕ್ರಮ; ಮೂವರು ಬೆಸ್ಕಾಂ ಸಿಬ್ಬಂದಿ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯುತ್ ಬಿಲ್ ನಲ್ಲಿ ಅಕ್ರಮ; ಮೂವರು ಬೆಸ್ಕಾಂ ಸಿಬ್ಬಂದಿ ಸಸ್ಪೆಂಡ್

ಬೆಂಗಳೂರು: ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ವಂಚಿಸುತ್ತಿದ್ದ ಮೂವರು ಬೆಸ್ಕಾಂ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಮುಳಬಾಗಿಲು ಉಪವಿಭಾಗದ ಮೆಹಬೂಬ್ ಪಾಷ, ಕಿರಿಯ ಸಹಾಯಕಿ ಗಾಯತ್ರಮ್ಮ, ಕಿರಿಯ ಸಹಾಯಕಿ ಸುಜಾತಮ್ಮ ಈ ಮೂವರು ಅಮಾನತುಗೊಂಡ ಸಿಬ್ಬಂದಿಗಳು.

ಮತ್ತೊಂದು ಮಹತ್ವದ ಸುಧಾರಣೆ ಕೈಗೊಂಡ ರೈಲ್ವೇ ಇಲಾಖೆ

ಗ್ರಾಹಕರಿಗೆ ವಿದ್ಯುತ್ ಬಿಲ್ ವಿತರಿಸುವ ವೇಳೆಯಲ್ಲಿ ಕೆಲವು ಬಿಲ್ಲುಗಳನ್ನು ಮಾರ್ಪಾಟು ಮಾಡಿ ಅದರ ಮೊತ್ತವನ್ನು ಕಡಿಮೆ ಮಾಡಿ ಆ ಮೂಲಕ ಬೆಸ್ಕಾಂಗೆ ಬರಬೇಕಾದ ವಾಸ್ತವಿಕ ಆದಾಯದಲ್ಲಿ ನಷ್ಟವುಂಟುಮಾಡುತ್ತಿದ್ದರು. ಬೇರೆ ಐಪಿ ವಿಳಾಸಗಳ ಗಣಕಯಂತ್ರಗಳಲ್ಲಿ ಐಡಿಗಳನ್ನು ಉಪಯೋಗಿಸಿ ವಂಚಿಸುತ್ತಿದ್ದರು. ಇವರ ವಿರುದ್ಧ ಕೋಲಾರ ಠಾಣೆಯಲ್ಲಿ ಎಫ್ ಐ ಆರ್ ಕೂಡ ದಾಖಲಾಗಿತ್ತು ಎಂದರು.

ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರ ನಡೆದರೂ ಸಹಿಸಲಲ್ಲ. ಅಕ್ರಮ ನಡೆಸುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಮೂವರು ಸಿಬ್ಬಂದಿಗಳನ್ನು ಅಮಾನತುಮಾಡಿ ಆದೇಶ ನೀಡಲಾಗಿದೆ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...